ಬೆಂಗಳೂರು, ಜ.27 (DaijiworldNews/KP): ಬಿ.ಕೆ. ಹರಿಪ್ರಸಾದ್ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ನೇಮಕ ಮಾಡಿರುವ ಬೆನ್ನಲ್ಲೇ ಬೇಸರಗೊಂಡ ಕಾಂಗ್ರೆಸ್ ಹಿರಿಯ ಎಂಎಲ್ಸಿ ಸಿ.ಎಂ ಇಬ್ರಾಹಿಂ ಪಕ್ಷ ತೊರೆಯುವ ಮುನ್ಸೂಚನೆ ನೀಡಿದ್ದಾರೆ.
ಈ ಕುರಿತು ಸುದ್ದಗಾರರೊಂದಿಗೆ ಮಾತನಾಡಿದ ಅವರು ಅಂದು ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಿದ್ದರು, ಇದು ತಿಳಿದು ಬಾದಾಮಿಯಲ್ಲಿ ಎಲ್ಲ ನಾಯಕರನ್ನು ಒಪ್ಪಿಸಿ ನಾಮಪತ್ರ ಹಾಕಿಸಿದ್ದೆ. ಈಗ ಬಾದಾಮಿಯಲ್ಲಿ ಗೆದ್ದು ಶಾಸಕರು ಕೂಡ ಆಗಿದ್ದಾರೆ. ಸಿದ್ದರಾಮಯ್ಯಗೆ ನಾವು ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೊರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ ಎಂದರು.
ಇನ್ನು ನಾನು ಅವರಿಗೆ ಹೊಸ ರಾಜಕೀಯ ಜೀವನ ಕೊಟ್ಟಿದ್ದೆ ಅದಕ್ಕಾಗಿ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯೊಂದಿಗೆ ತೆಗೆದುಕೊಂಡ ನಿರ್ಧಾರದ ಬಗ್ಗೆ ತಿಳಿದು ಸಂತೋಷವಾಯಿತು. ಈ ನಿರ್ಧಾರದಿಂದ ಡಿ.ಕೆ.ಶಿವಕುಮಾರ್ ಮತ್ತು ಬಿ.ಕೆ.ಹರಿಪ್ರಸಾದ್ ಜತೆಯಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ. ಅವರಿಬ್ಬರ ಆಲೋಚನಾ ಕ್ರಮಗಳು ಚೆನ್ನಾಗಿ ಹೊಂದಿಕೆಯಾಗುವುದರಿಂದ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡಬಹುದು. ಈಗ ನನಗೆ ಮಾಧ್ಯಮ, ನ್ಯಾಯಾಂಗದಲ್ಲಿ ಮಾತ್ರ ನನಗೆ ವಿಶ್ವಾಸ ಉಳಿದಿದೆ ಎಂದಿದ್ದಾರೆ.
ಸ್ವಲ್ಪ ಸಾಲ ಇದೆ ಅದನ್ನು ತೀರಿಸಬೇಕಾಗಿದೆ, ಸಾಲ ತೀರಿದ್ದರೆ ಮೊದಲೇ ತೀರ್ಮಾನ ಮಾಡುತ್ತಿದ್ದೆ, 8-10 ದಿನದಲ್ಲಿ ಸಾಲ ತೀರಿಸಿ ತೀರ್ಮಾನ ಮಾಡುತ್ತೇನೆ. ಸಿದ್ದರಾಮಯ್ಯ ಹಾಗೂ ದೇವೇಗೌಡರಿಂದ ಜೈಲಿಗೆ ಹೋಗಿ ಬಂದ ಜೆಡಿಎಸ್ ಪಕ್ಷವನ್ನು ತೊರೆದಿದ್ದು. ಮುಂದಿನ ಕ್ರಮದ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮುನ್ಸೂಚನೆ ನೀಡಿದ್ದಾರೆ.
ಇನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸುವ ಫೋಟೋಗಳನ್ನು ಪ್ರದರ್ಶಿಸಿದರು. ಅವರು ಹೋದ ನಂತರ "ಕಾಂಗ್ರೆಸ್ ಕೋವಿಡ್ ಸೋಂಕಿನಿಂದ ಗುಣವಾಗುತ್ತದೆಯೇ" ಎಂದು ನೋಡಲು ಬಯಸುತ್ತೇನೆ ಎಂದು ಅವರು ಟೀಕಿಸಿದರು.