ಬೆಂಗಳೂರು, ಜ 27 (DaijiworldNews/HR): ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದರು.
ಇನ್ನು ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಕೊರೊನಾ ನಿರ್ವಹಣೆ ಕುರಿತಾಗಿಯೂ ಹಲವು ಸಲಹೆ ಸೂಚನೆಗಳು ಬಂದಿದ್ದು, ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ ಎಂದು ಹೇಳಿದ್ದಾರೆ.