ಬೆಂಗಳೂರು, ಜ 28 (DaijiworldNews/HR): ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 62 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದ ಸಿಎಂ ಬಸವರಾಜ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು ಬೊಮ್ಮಾಯಿ ಅವರು ಕರ್ನಾಟಕದ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ಮತ್ತು ಬಡವರ ಪರ ಅವರು ಅತ್ಯುತ್ತಮ ಯೋಜನೆಗಳನ್ನು ಮಾಡುತ್ತಿದ್ದು, ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಮುಖ್ಯಮಂತ್ರ್ ಬೊಮ್ಮಾಯಿ ಅವರ ಹುಟ್ಟುಹಬ್ಬಕ್ಕೆ ರಾಜಕಾರಣಿಗಳು, ಸಿನಿಮಾ ನಟ ನಟಿಯರು ಸೇರಿದಂತೆ ಎಲ್ಲರೂ ಶುಭಾಶಯಗಳು ಕೋರುತ್ತಿದ್ದಾರೆ.
ನಾನು ಇಲ್ಲಿಯವರೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ ಹಾಗೆಯೇ ಇವತ್ತು ಕೂಡ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.