ನವದೆಹಲಿ, ಜ 28 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,51,209 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ದಿನದ ಪಾಸಿಟಿವಿಟಿ ರೇಟ್ ಶೇ.15.88ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,51,209 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 627 ಜನ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 492327ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2105611 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 347443 ಜನರು ಕೋವಿಡ್ ನಿಂದ ಗುಣಮುಖರಾಗಿ, ದೇಶದಲ್ಲಿ ಈವರೆಗೆ 38024771 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.