ಬೆಂಗಳೂರು, ಜ 28 (DaijiworldNews/HR): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಎಂಬ ಮಾಹಿತಿ ಲಭ್ಯವಾಗಿದೆ.
ಬಿಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಪತಿಯವರ ಮಗಳು ಸೌಂದರ್ಯ (30) ಮನೆಯಲ್ಲಿಯೇ ಫ್ಯಾನ್ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದು, 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಸೌಂದರ್ಯ ವಿವಾಹವಾಗಿ ಅವರಿಗೆ ಒಂದು ಮಗು ಇದೆ.
ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದು, ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.