ಬೆಂಗಳೂರು, ಜ 29 (DaijiworldNews/HR): ಕನ್ನಡ ಸಿನಿಮಾ ನತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಅರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನಿರ್ಮಾಪಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಬಂಧಿತರನ್ನು ವಿಷನ್ 2023 ಎಂಬ ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಎಂದು ಗುರುತಿಸಲಾಗಿದೆ.
ನಿರ್ಮಾಪಕ ಹರ್ಷವರ್ಧನ್ ಟಿ.ಜಿ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಿನಿಮಾ ನಟಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಂಡಿರುವ ಪೊಲೀಸರು ಹರ್ಷವರ್ಧನ್ ಅವರನ್ನು ಬಂಧಿಸಿದ್ದಾರೆ.
ಇನ್ನು ಸಿನಿಮಾಗಳಲ್ಲಿ ಸಹನಟಿಯಾಗಿ ನಟಿಸುತ್ತಿದ್ದ ಮಹಿಳೆಗೆ ಹರ್ಷವರ್ಧನ್ ಮದುವೆಯಾಗುವುದಾಗಿ ನಂಬಿಸಿ ಕಳೆದ 2 ವರ್ಷಗಳಿಂದ ನನ್ನನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಹರ್ಷವರ್ಧನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಿಸಿದ್ದಾರೆ.