ಬೆಂಗಳೂರು, ಜ 29 (DaijiworldNews/HR): ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎಲ್ಲದಕ್ಕೂ ಪ್ರತಿಕ್ರಿಯೆ ಕೊಡಬೇಕು ಎಂಬ ಚಟವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ತಾನು ಮಾಡಿದ್ದೇ ಸರಿ ಎಂಬ ಭಾವನೆ, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆ ಎಂಬ ಅಹಂ ಅವರಿಗಿದೆ. ಹಾಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಲೇ ಇರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಕೇವಲ ಆರು ತಿಂಗಳಲ್ಲಿ ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ 5 ವರ್ಷ ಆಡಳಿತ ನಡೆಸಿದರು ಏನೂ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಜನರು ಸಿದ್ದರಾಮಯ್ಯ ಅವರನ್ನು, ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದರು ಎಂದಿದ್ದಾರೆ.