ನವದೆಹಲಿ, ಜ. 29(DaijiworldNews/SM): ಆಮ್ ಆದ್ಮಿ ಪಕ್ಷ ಪಂಜಾಬ್ನಲ್ಲಿ ಅಧಿಕಾರಕ್ಕೆ ಬಂದಲ್ಲಿ ಯಾವುದೇ ಹೊಸ ತೆರಿಗೆಗಳನ್ನು ವಿಧಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತದಾರರಿಗೆ ಭರವಸೆ ನೀಡಿದ್ದಾರೆ.
ಶನಿವಾರ ಪಂಜಾಬ್ನ ಜಲಂಧರ್ ಪ್ರದೇಶದಲ್ಲಿ ಪ್ರಚಾರ ಕಾರ್ಯದಲ್ಲಿ ಅರವಿಂದ್ ಕೇಜ್ರಿವಾಲ್ ಭಾಗವಹಿಸಿದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಮೇಲೆ ಹೆಚ್ಚುವರಿ ತೆರಿಗೆ ಭಾರ ಹಾಕುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಮಾತನಾಡುವ ಸಂದರ್ಭದಲ್ಲಿ ಹೇಳಿಕೆ ಕೊಟ್ಟಿದ್ದ ಅರವಿಂದ್ ಕೇಜ್ರಿವಾಲ್, ರಾಜ್ಯದ ವಾರ್ಷಿಕ ಹಣಕಾಸು ಬಜೆಟ್ ಅನ್ನು ಸಾರ್ವಜನಿಕರ ಸಲಹೆಗಳೊಂದಿಗೆ ಸಿದ್ಧಪಡಿಸಲಾಗುವುದು ಎಂದಿದ್ದರು. ಸಾರ್ವಜನಿಕ ಅಭಿಪ್ರಾಯವನ್ನು ಪರಿಗಣಿಸಿ ತಮ್ಮ ಸರ್ಕಾರ ಬಜೆಟ್ ಅನ್ನು ಸಿದ್ಧಪಡಿಸುತ್ತದೆ ಎಂದು ಹೇಳಿದ್ದರು.
ಪಂಜಾಬ್ನ ಜನರು, ವ್ಯಾಪಾರಿಗಳು ಮತ್ತು ಉದ್ಯಮಿಗಳೊಂದಿಗಿನ ಸಭೆಯಲ್ಲಿ ಅವರ ಸಮಸ್ಯೆಗಳನ್ನು ಪರಿಹರಿಸಲು ಎಎಪಿ ಸರ್ಕಾರವು ಸ್ವೀಕರಿಸಿದ ಸಲಹೆಗಳನ್ನು ಬಜೆಟ್ನಲ್ಲಿ ಸೇರಿಸುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.