ಕಾಶ್ಮೀರ, ಜ 30 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ಎರಡು ಪ್ರತ್ಯೇಕ ಎನ್ಕೌಂಟರ್ಗಳು ನಡೆದಿದ್ದು, ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೈಬಾ ಮತ್ತು ಜೆಇಎಂನೊಂದಿಗೆ ಸಂಬಂಧ ಹೊಂದಿದ್ದ ಐವರು ಉಗ್ರರಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ ಮತ್ತು ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕಾಶ್ಮೀರ ವಲಯದ ಪೊಲೀಸರು, "ಕಳೆದ 12 ಗಂಟೆಗಳಲ್ಲಿ ನಡೆದ ಎರಡು ಎನ್ಕೌಂಟರ್ಗಳಲ್ಲಿ ಜೆಇಎಂ ಕಮಾಂಡರ್ ಭಯೋತ್ಪಾದಕ ಜಾಹಿದ್ ವಾನಿ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸೇರಿದಂತೆ ಐವರು ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ ಎಂದು ತಿಳಿಸಿದಾರೆ.
ಇನ್ನು ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದು, ಬುದ್ಗಾಮ್ನ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೊಳಿಸಲಾಗಿದೆ. ಈ ವೇಳೆ ʻಎಕೆ 56 ರೈಫಲ್ʼ ಸೇರಿದಂತೆ ದೋಷಾರೋಪಣೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.