ನವದೆಹಲಿ, ಜ 30 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ರೇಟ್ ಶೇ.14.50ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಾವಿನ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 893 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 494091 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1884937 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 352784 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38713494 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಶನಿವಾರ 62,22,682 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,65,70,60,692 ಜನರಿಗೆ ಲಸಿಕೆ ಹಾಕಲಾಗಿದೆ.