ನವದೆಹಲಿ, ಜ 30 (DaijiworldNews/HR): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನ 85 ನೇ ಆವೃತ್ತಿಯಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತ ಅಮೈ ಮಹಾಲಿಂಗ ನಾಯ್ಕರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಲ್ಲರೂ ಬೆರಗಾಗುವ ಸಾಧನೆಯನ್ನು ಮಹಾಲಿಂಗ ನಾಯ್ಕರು ಮಾಡಿದ್ದು, ಅವರು ರೈತರಿಗೆ ಮಾದರಿಯಾಗಿದ್ದಾರೆ. ಅವರು ಪ್ರಶಸ್ತಿಗೆ ಯೋಗ್ಯವಾದ ಸಾಧನೆ ಮಾಡಿದ್ದಾರೆ ಎಂದರು.
ದೇಶದಲ್ಲಿ ಪದ್ಮ ಪ್ರಶಸ್ತಿ ಕೂಡ ಘೋಷಣೆಯಾಗಿದ್ದು, ಪ್ರತಿಯೊಬ್ಬ ಪದ್ಮ ಪ್ರಶಸ್ತಿ ಪುರಸ್ಕೃತರು ನಮ್ಮ ರಾಷ್ಟ್ರ ಮತ್ತು ಸಮಾಜಕ್ಕೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ್ದಾರೆ. ನಮ್ಮ ದೇಶದ ಅಸಾಧಾರಣ ವೀರರು, ಅವರು ಸಾಮಾನ್ಯ ಸಂದರ್ಭಗಳಲ್ಲಿ ಅಸಾಮಾನ್ಯ ಕೆಲಸಗಳನ್ನು ಮಾಡಿದ್ದಾರೆ ಎಂದಿದ್ದಾರೆ.