ಬೆಂಗಳೂರು, ಜ 30 (DaijiworldNews/HR): ಕಾಂಗ್ರೇಸ್ನ ಶಾಸಕ ಯು.ಟಿ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ.
ಯು.ಟಿ ಖಾದರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.
ಇನ್ನು ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತರಿಗೆ ಯಾರಿಗೂ ಸ್ಥಾನ ಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಇದೀಗ ಖಾದರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ನೇಮಕ ಮಾಡಲಾಗಿದೆ.