ಪಣಜಿ, ಜ. 30(DaijiworldNews/SM): ಗೋವಾ ಚುನಾವಣಾ ಕಣ ರಂಗೇರಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೋವಾ ಪ್ರವಾಸ ಕೈಗೊಂಡು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು. ಅಲ್ಲದೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಗೋವಾದಲ್ಲಿ ಬಿಜೆಪಿ ಅಪಾರ ಅಭಿವೃದ್ಧಿಯನ್ನು ಮಾಡಿದೆ. 2013-14ರಲ್ಲಿ ರಾಜ್ಯದ ಬಜೆಟ್ ಗಾತ್ರ 432 ಕೋಟಿ ಇತ್ತು. 2021ರಲ್ಲಿ ಅದನ್ನು 2,567 ಕೋಟಿಗೆ ಏರಿಕೆ ಮಾಡಲಾಗಿದೆ" ಎಂದು ಅಮಿತ್ ಶಾ ಹೇಳಿದರು.
ಮತ್ತೆ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬೇರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ಗೋವಾದಲ್ಲಿ ಸರ್ಕಾರ ರಚನೆ ಮಾಡುವುದಿಲ್ಲ" ಎಂದು ಅಮಿತ್ ಶಾ ಟಿಎಂಸಿ ಮತ್ತು ಆಮ್ ಅದ್ಮಿ ಪಕ್ಷಕ್ಕೆ ತಿರುಗೇಟು ನೀಡಿದರು.
ಇನ್ನು 40 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 14ರಂದು ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.