ನವದೆಹಲಿ, ಜ 31 (DaijiworldNews/HR): 2022ನೇ ವರ್ಷದ ಬಜೆಟ್ನ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದ್ದು, ಈ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿ ಪ್ರಮುಖ ಆದ್ಯತೆ ಆಗಿರುವ ಸಾಧ್ಯತೆ ಇದೆ.
ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಅವರ ನಾಲ್ಕನೇ ಬಜೆಟ್ನಲ್ಲಿ ಉದ್ಯೋಗ, ಆರೋಗ್ಯ ರಕ್ಷಣೆ ಮತ್ತು ಶಿಕ್ಷಣದ ಮೇಲಿನ ರಿಯಾಯಿತಿಗಳು, ತೆರಿಗೆ ವಿನಾಯಿತಿಗಳು ಮತ್ತು ಹಣದುಬ್ಬರವನ್ನು ನಿಭಾಯಿಸುವ ಕ್ರಮಗಳ ಭರವಸೆಯನ್ನು ಹೊಂದಿದ್ದಾರೆ.
ಇನ್ನು ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರವರಿ 11, 2022 ರಂದು ಮುಕ್ತಾಯಗೊಳ್ಳುತ್ತದೆ. ಒಂದು ತಿಂಗಳ ಅವಧಿಯ ವಿರಾಮದ ನಂತರ, ಅಧಿವೇಶನದ ಭಾಗ ಎರಡು ಮಾರ್ಚ್ 14, 2022 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8, 2022 ರಂದು ಮುಕ್ತಾಯಗೊಳ್ಳುತ್ತದೆ.
ಸೋಮವಾರ ರಾಷ್ಟ್ರಪತಿ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.