ಬೆಂಗಳೂರು, ಜ 31 (DaijiworldNews/HR): ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್ ನಲಪಾಡ್ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು.
ಇನ್ನು ಕಾಂಗ್ರೆಸ್ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್ ನಲಪಾಡ್ ಗೆ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದು, ಇದೀಗ ಈಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಲಪಾಡ್ ಅಧಿಕಾರ ಸ್ವೀಕಾರಿಸಿದ್ದಾರೆ.