ದೆಹಲಿ, ಜ.31 (DaijiworldNews/KP): 2022ರ ಕೇಂದ್ರ ಬಜೆಟ್ ಅಧಿವೇಶನವನ್ನು ಸೋಮವಾರ ಆರಂಭಗೊಂಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೋಟ್ಯಂತರ ಜನರ ಜೀವ ಉಳಿಸಿದ ಕೊರೋನಾ ವಾರಿಯರ್ಸ್ಗೆ ತಮ್ಮ ಭಾಷಣದಲ್ಲಿ ಕೃತಜ್ಞತೆ ಸಲ್ಲಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಸಮಾಜವು ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆಯನ್ನು ಆಧರಿಸಿದ ಒಂದು ಸಮಾಜವಾಗಿದೆ. ಪ್ರಜಾಪ್ರಭುತ್ವವು ಕೇವಲ ಸರ್ಕಾರದ ಒಂದು ರೂಪವಲ್ಲ, ಬದಲಾಗಿ ಪ್ರಜಾಪ್ರಭುತ್ವದ ಮೂಲವೇ ಜನರನ್ನು ಗೌರವಿಸುವ ಭಾವನೆಯಾಗಿದೆ. ನನ್ನ ಸರ್ಕಾರ ಬಾಬಾಸಾಹೇಬರ ಆದರ್ಶಗಳನ್ನು ತನ್ನ ಮಾರ್ಗದರ್ಶಿ ತತ್ವವೆಂದು ಪರಿಗಣಿಸಿದ್ದೇವೆ ಎಂದರು.
ಈ ವರ್ಷದಿಂದ ಕೇಂದ್ರ ಸರ್ಕಾರವು ನೇತಾಜಿಯವರ ಜನ್ಮದಿನ ಜ 23ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭಿಸಿದ್ದು. ದೇಶದ ಸುರಕ್ಷಿತ ಭವಿಷ್ಯಕ್ಕಾಗಿ ಇತಿಹಾಸವನ್ನು ನೆನಪಿಟ್ಟುಕೊಳ್ಳುವುದು ಮತ್ತು ಅದರಿಂದ ಕಲಿಯುವುದು ಬಹಳ ಇದೆ ಎಂದು ನಮ್ಮ ಸರ್ಕಾರವು ನಂಬುತ್ತ ಬಂದಿದೆ ಎಂದು ತಿಳಿಸಿದರು.
ತಮ್ಮ ಕರ್ತವ್ಯಗಳಿಗೆ ಆದ್ಯತೆ ನೀಡಿ ಭಾರತದ ಹಕ್ಕುಗಳನ್ನು ಪಡೆಯಲು ಸಹಾಯ ಮಾಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ತಲೆಬಾಗುತ್ತೇನೆ ಜೊತೆಗೆ ಸ್ವಾತಂತ್ರ್ಯದ 75 ವರ್ಷಗಳಲ್ಲಿ ಭಾರತದ ಅಭಿವೃದ್ಧಿ ಪಯಣಕ್ಕೆ ಕೊಡುಗೆ ನೀಡಿದ ವ್ಯಕ್ತಿಗಳನ್ನು ನಾನು ಈ ಸಂರ್ಭದಲ್ಲಿ ಗೌರವದಿಂದ ಸ್ಮರಿಸುತ್ತೇನೆ ಎಂದು ಹೇಳಿದರು.
ಇನ್ನು ಕೊರೊನಾದಿಂದಾಗಿ ಅನೇಕ ಜೀವಗಳು ಬಲಿಯಾಗುವೆ. ಅಂತಹ ಸಂದರ್ಭಗಳಲ್ಲಿ ನಮ್ಮ ಕೇಂದ್ರ, ರಾಜ್ಯಗಳು, ವೈದ್ಯರು, ದಾದಿಯರು, ವಿಜ್ಞಾನಿಗಳು, ನಮ್ಮ ಆರೋಗ್ಯ ಕಾರ್ಯಕರ್ತರು ಒಂದು ತಂಡವಾಗಿ ಕೆಲಸ ಮಾಡಿದ್ದಾರೆ. ಬಹಳ ಮುಖ್ಯವಾಗಿ ಸಾಂಕ್ರಾಮಿಕ ರೋಗ ಮಹಾಮಾರಿ ಕೊರೋನಾ ವಿರುದ್ಧ ಭಾರತ ಯಶಸ್ವಿಯಾಗಿ ಹೋರಾಟ ನಡೆಸಲು ಕಾರಣರಾದ ಕೊರೋನಾ ವಾರಿಯರ್ಸ್ಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತದ ಸಾಮರ್ಥ್ಯ ಏನು ಎಂಬುದನ್ನು ಲಸಿಕೆ ಕಾರ್ಯಕ್ರಮದಲ್ಲಿ ಸ್ಪಷ್ಟವಾಗಿ ಹೇಳಿದೆ, ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ, ನಾವು 150 ಕೋಟಿ ಡೋಸ್ಗಳ ಲಸಿಕೆಯನ್ನು ನೀಡಿದ ದಾಖಲೆಯನ್ನು ಮಾಡಿದ್ದೇವೆ. ಇಂದು, ಗರಿಷ್ಠ ಸಂಖ್ಯೆಯ ಡೋಸ್ಗಳನ್ನು ನೀಡುವ ವಿಷಯದಲ್ಲಿ ನಾವು ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದ್ದೇವೆ ಎಂದರು.