ಚೆನ್ನೈ, ಜ.31 (DaijiworldNews/KP): ಧಾರ್ಮಿಕ ಮತಾಂತರಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದ ತಂಜಾವೂರಿನ ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಮದ್ರಾಸ್ ಹೈಕೋರ್ಟ್ ಸೋಮವಾರ ಆದೇಶ ನೀಡಿದೆ.
ವಿದ್ಯಾರ್ಥಿನಿ ಕ್ರಿಶ್ಚಿಯನ್ ಮಿಷನರಿ ಶಾಲೆ ಓದುತ್ತಿದ್ದು, ಆಕೆ ಅರಿಯಲೂರು ಜಿಲ್ಲೆಯವಳಾಗಿದ್ದರಿಂದ, ಶಾಲೆಯ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದಳು, ಆದರೆ ಬಾಲಕಿಯನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪವು ಕೇಳಿಬಂದ ಹಿನ್ನಲೆ ತಮಿಳುನಾಡಿನಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಅಲ್ಲದೆ ಹಾಸ್ಟೆಲ್ನಲ್ಲಿ ಮನೆಕೆಲಸಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದ, ಅದಕ್ಕೆ ಸಾಕ್ಷಿಯಾಗಿ ಎಂಬಂತೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ವೀಡಿಯೊ ಕ್ಲಿಪ್ ಒಂದು ಹೊರಬಿದ್ದಿರುವುದನ್ನು ಪೋಷಕರು ಹೈಕೋರ್ಟ್ನ ಗಮನಕ್ಕೆ ತಂದಿದ್ದಾರೆ.
ತಂಜಾವೂರಿನ ವಿದ್ಯಾರ್ಥಿನಿ ಆತ್ಮಹತ್ಯೆ ತಮಿಳುನಾಡಿನಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದು, ಆದಕ್ಕೆ ಪೂರಕ ಎನ್ನುವಂತೆ ಬಾಲಕಿ ಧಾರ್ಮಿಕ ಮತಾಂತರಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ವಿವಾದಾತ್ಮಕ ವಿಡಿಯೋ ಚಿತ್ರೀಕರಿಸಲಾಗಿತ್ತು, ಈಗ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯನ್ನು ಪೊಲೀಸ್ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠಕ್ಕೆ ರಾಜ್ಯ ಸರ್ಕಾರ ತಿಳಿಸಿದೆ.
ಇನ್ನು ಬಾಲಕಿಯ ಪೋಷಕರ ಪರ ವಕೀಲರು ನ್ಯಾಯಾಧೀಶರಿಗೆ ’ಪೋಷಕರಿಗೆ ಪೊಲೀಸ್ ತನಿಖೆಯ ಮೇಲೆ ನಂಬಿಕೆಯಿಲ್ಲದ ಕಾರಣ ಬಾಹ್ಯ ಏಜೆನ್ಸಿಯಿಂದ ತನಿಖೆಯಾಗುವಂತೆ ಮನವಿ ಸಲ್ಲಿಸಿದ್ದರು’. ಈ ಮನವಿಯನ್ನು ನಾಯಧೀಶರು ಪುರಸ್ಕರಿಸಿ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡುವಂತೆ ಆದೇಶವನ್ನು ಹೊರಡಿಸಿದೆ.