ಬೆಂಗಳೂರು, ಜ. 31 (DaijiworldNews/SM): ಬಡವರಿಗೆ ನಿವೇಶನ ಹಾಗೂ ಮನೆಗಳನ್ನು ಒದಗಿಸಲು ಕಾನೂನು ಸರಳೀಕರಣ ಮಾಡಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಕಾನೂನು ಬದ್ಧವಾಗಿ ಬಡಾವಣೆಗಳು ಅಭಿವೃದ್ಧಿಯಾಗದಿದ್ದರೆ, ಮೂಲಭೂತ ಸೌಕರ್ಯಗಳ ಕೊರತೆಗಳಿರುವ ಕಂದಾಯ ನಿವೇಶಗಳು ದೊಡ್ಡ ಸಂಖ್ಯೆಯಲ್ಲಿ ಹೆಚ್ಚಾಗುತ್ತವೆ. ಈ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಬಡವರಿಗೆ ಮನೆ, ನಿವೇಶನ ಪಡೆಯಲು ಸರ್ಕಾರ ಕಾನೂನಿನ ಸರಳೀಕರಣ ಮಾಡಲಿದೆ ಎಂದರು.
ಪ್ರಸ್ತುತ ನಿವೇಶ ಹಂಚಿಕೆ ವಿಚಾರದಲ್ಲಿ ಸರಕಾರ ಅಲ್ಪ ಸಂಕಷ್ಟವನ್ನು ಎದುರಿಸುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ನಿವಾರಿಸಲಾಗುವುದೆಂದು ಅವರು ತಿಳಿಸಿದ್ದಾರೆ.