ನವದೆಹಲಿ, ಫೆ 01(DaijiworldNews/MS): ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,67,059 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,67,059 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1192 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ದೇಶದಲ್ಲಿ 17,43,059 (4.20%) ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಧನಾತ್ಮಕತೆ ದರವು 11.69% ದಷ್ಟಿದೆ. ಕಳೆದ 24 ಗಂಟೆಗಳಲ್ಲಿ 1192 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
2,54,076 ಮಂದಿ ಕಳೆದ 24 ಗಂಟೆಗಳಲ್ಲಿ ಚೇತರಿಸಿಕೊಂಡಿದ್ದು, ಒಟ್ಟು 1,66,68,48,204 ಮಂದಿಗೆ ಲಸಿಕೆ ಹಾಕಲಾಗಿದೆ.