ನವದೆಹಲಿ, ಫೆ 01 (DaijiworldNews/HR): ಸಂಸತ್ತಿನ ಬಜೆಟ್ ಅಧಿವೇಶನ ನಿನ್ನೆಯಿಂದ ಆರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ನಾಲ್ಕನೇ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದು, ಇದೀಗ ಹಣಕಾಸು ಸಚಿವಾಲಯಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದಾರೆ.
ಈ ಕುರಿತು ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್ ಮಾತನಾಡಿ, ಬಜೆಟ್ ಮಂಡನೆಯನ್ನು ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಎಲ್ಲಾ ಸದಸ್ಯರು ಶಾಂತವಾಗಿ ಸದನದಲ್ಲಿ ಕುಳಿತು ಆಲಿಸುವಂತೆ ಮನವಿ ಮಾಡಿಕೊಂಡಿದ್ದು, ಬಜೆಟ್ ಮಂಡಿಸುವ ಹೊತ್ತಿನಲ್ಲಿ ಎಲ್ಲಾ ಸದಸ್ಯರು ಸಹಕಾರ ನೀಡಬೇಕು" ಎಂದು ಕೇಳಿಕೊಂಡಿದ್ದಾರೆ.
ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ಪ್ರತಿಯೊಂದು ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿ ಅಂತರ್ಗತ ಬಜೆಟ್ ಅನ್ನು ಮಂಡಿಸಲಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದಿದ್ದಾರೆ.
ಇನ್ನು ವರ್ಷವೂ ಕಾಗದ ರಹಿತ ಮಾದರಿಯಲ್ಲಿ ಬಜೆಟ್ ಮಂಡನೆಯಾಗಲಿದೆ. ಕಳೆದ ವಾರಿಯೂ ಸೀತಾರಾಮನ್ ಅವರ ಬಜೆಟ್ ಭಾಷಣವು ಭಾರತದ ಸಂಸತ್ತಿನ ಇತಿಹಾಸದಲ್ಲಿಯೇ ಸುದೀರ್ಘವಾಗಿತ್ತು. ಅವರ ಪ್ರಸ್ತುತಿಯ ಅವಧಿ 2 ಗಂಟೆ 40 ನಿಮಿಷಗಳಿಂದ ಕೂಡಿತ್ತು.