ಬೆಂಗಳೂರು, ಫೆ 01 (DaijiworldNews/HR): ಕೇಂದ್ರ ಬಜೆಟ್ನಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಕೆಲ ನಿರ್ಧಾರ ಆಗಲಿದ್ದು, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇಂದಿನ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಹೆಚ್ಚಿನ ನಿರೀಕ್ಷೆ ಇದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದ ಆಯ್ಕೆ ಆಗಿ ಹೋದವರು. ಹಾಗಾಗಿ ಸಹಜವಾಗಿಯೇ ನಿರೀಕ್ಷೆ ಇದೆ ಎಂದರು.
ಇನ್ನು ರಾಜ್ಯದ ಮಟ್ಟಿಗೆ ಈಗಾಗಲೇ ಸಬರ್ಬಲ್ ಲೈಲ್ವೆ ಅಪ್ರೂವಲ್ ಆಗಿದ್ದು, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಹೊಸ ಯೋಜನೆ, ಉದ್ಯೋಗ ಸೃಷ್ಟಿ ಎಲ್ಲವೂ ಇನ್ನು ಸ್ಪಲ್ಪ ಹೊತ್ತಿನಲ್ಲೇ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.