ನವದೆಹಲಿ, ಫೆ 01 (DaijiworldNews/HR): ಏಪ್ರಿಲ್ 1ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದೀಗ ಸಂಸತ್ ನಲ್ಲಿ ಬಜೆಟ್ ಮಂಡನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರಂಭಿಸಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲು ಆರಂಭಿಸಿದ್ದು, ಇದಕ್ಕೂ ಮುನ್ನಾ ಇಂದು ನಡೆದಂತ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.20ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಒಪ್ಪಿಗಾಗಿ ಮಂಡಿಸಿದರು.
ಇನ್ನು ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಬಜೆಟ್ ಮಂಡನೆಗೆ ಅವಕಾಶ ನೀಡಿದ್ದು, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ.