ನವದೆಹಲಿ, ಫೆ 01 (DaijiworldNews/HR): 2022ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದ್ದು, ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಪ್ರಾರಂಭವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭಾಗಲಿದ್ದು, ಒನ್ ನೇಷನ್ ಒನ್ ರಿಜಿಸ್ಟ್ರೇಷನ್ (ಒಂದು ದೇಶ, ಒಂದು ನೋಂದಣಿ) ವ್ಯವಸ್ಥೆ ಸ್ಥಾಪನೆಯಾಗಲಿದೆ. ಆಸ್ತಿ ನೋಂದಣಿಗೆ ಡಿಜಿಟಲ್ ವ್ಯವಸ್ಥೆ ಜಾರಿ,ಆಸ್ತಿ ನೋಂದಣಿ ಇನ್ಮುಂದೆ ಡಿಜಿಟಲೀಕರಣ ಮಾಡಲಾಗುವುದು ಎಂದರು.
ಇನ್ನು 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಸ್ಥಾಪಿಸಲಾಗುವುದು. ಗ್ರಾಮ ಸೌಕರ್ಯ ಅಭಿವೃದ್ಧಿ ಆರ್ಥಿಕ ನೆರವು. ಎಲ್ಲಾ ಫೋಸ್ಟ್ ಆಫೀಸ್ ಗಳಲ್ಲೂ ಬ್ಯಾಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.