ನವದೆಹಲಿ, ಫೆ 01 (DaijiworldNews/HR): ಆರ್ಬಿಐನಿಂದ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದರು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದಲೇ ಡಿಸಿಟಲ್ ಕರೆನ್ಸಿ ಬಿಡುಗಡೆಯಾಗಲಿದ್ದು, ಇದೇ ವರ್ಷದಲ್ಲಿ ಡಿಜಿಟಲ್ ಕರೆನ್ಸಿಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.
ಇನ್ನು 2022-23ರಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ ಡಿಜಿಟಲ್ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.