ನವದೆಹಲಿ, ಫೆ 03 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,72,433 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 1,72,433 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 ಗಂಟೆಯಲ್ಲಿ 1008 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 1533921 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259107 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದ ದಿನದ ಪಾಸಿಟಿವಿಟಿ ರೇಟ್ 10.99ರಷ್ಟಿದೆ.