ನವದೆಹಲಿ, ಫೆ 04 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,49,394 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 1072 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 1,49,394 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 1072 ಜನ ಮಹಾಮಾರಿಗೆ ಬಲಿಯಾಗಿ ದೇಶದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 498983ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1435569 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 246674 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟೂ 40017088 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಗುರುವಾರ55,58,760 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,68,47,16,068 ಜನರಿಗೆ ಲಸಿಕೆ ಹಾಕಲಾಗಿದೆ.