ನವದೆಹಲಿ, ಫೆ 04 (DaijiworldNews/HR): ಮಾರ್ಚ್ 12ರಿಂದ ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಗಳನ್ನು 6 ರಿಂದ 8 ವಾರಗಳ ಕಾಲ ನಂತರ ಆಯೋಜಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತವಾಗಿ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಪಿಜಿ ನೀಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇಂದು ತೀರ್ಪು ಕೂಡ ಪ್ರಕಟವಾಗುವ ಸಾಧ್ಯತೆ ಕೂಡ ಇದ್ದು, ಇದರ ನಡುವೆ ನೀಟ್ ಪಿಜಿ ಪರೀಕ್ಷೆಯನ್ನು ಮುಂದಿನ 6 ರಿಂದ 8 ವಾರಗಳವರೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ನೀಟ್ ಪಿಜಿ 2022ರ ಪರೀಕ್ಷೆಯನ್ನು ಮುಂದಿನ 6 ರಿಂದ 8 ವಾರಗಳ ಕಾಲ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದೆ.