ರಾಂಪುರ, ಫೆ 05 (DaijiworldNews/MS): ನಿಯಂತ್ರಣ ತಪ್ಪಿದ ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದತಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಚಾಲಕ ಸೇರಿ ಕಾರಿನಲ್ಲಿ 6 ಜನರು ಪ್ರಯಾಣ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ 6 ಮಂದಿ ಪೈಕಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುಪಿ-ಉತ್ತರಾಖಂಡ್ ಗಡಿಯಲ್ಲಿರುವ ಸ್ವರ್ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಇಕೋ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಶಿಕಂಪುರ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದ ಸಮೀಪದಲ್ಲಿ ಒಂದು ಅಡ್ಡರಸ್ತೆ ಇದೆ. ಇಲ್ಲಿನ ಸ್ಪೀಡ್ ಬ್ರೇಕರ್ ಬಳಿಕ ಕಾರು ನಿಯಂತ್ರಣ ತಪ್ಪಿದ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.