ಮುಂಬೈ, , ಫೆ 05 (DaijiworldNews/MS): ಕೋವಿಡ್ ಸೋಂಕು ತಗುಲಿ ಕಳೆದ ತಿಂಗಳು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಮತ್ತೆ ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ಇಂದು ಅವರ ಆರೋಗ್ಯ ಮತ್ತೆ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ನೆರವು ನೀಡಲಾಗಿದೆ.
ಲತಾ ಮಂಗೇಶ್ಕರ್ ಅವರಿಗೆ ಡಾ ಪ್ರತೀತ್ ಸಮದಾನಿ ಮತ್ತು ಅವರ ತಂಡವು ಚಿಕಿತ್ಸೆ ನೀಡುತ್ತಿದ್ದಾರೆ.