ಕಲಬುರಗಿ, ಫೆ 05 (DaijiworldNews/HR): ಹಿಜಾಬ್ ಅನ್ನು ಸರ್ಕಾರ ಹೇಗೆ ಬ್ಯಾನ್ ಮಾಡುತ್ತೆ ನೋಡುತ್ತೇವೆ. ನಾನು ವಿಧಾನಸೌಧ, ಸದನಕ್ಕೂ ಹಿಜಾಬ್ ಧರಿಸಿಯೇ ಹೋಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ ಸವಾಲು ಹಾಕಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಮ್ಮ ಧರ್ಮದ ಸಾಂಪ್ರದಾಯಿಕ ಉಡುಪು. ಧರಿಸುವುದು ನಮ್ಮ ಹಕ್ಕು. ಹಿಜಾಬ್ ಬ್ಯಾನ್ ಮಾಡಿದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದರು.
ಇನ್ನು ಹಿಜಾಬ್ ಬೆಂಬಲಿಸಿ ಕಲಬುರಗಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದು, ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಹಿಜಾಬ್ ಧರಿಸಿಕೊಂಡು ಆಗಮಿಸಿದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.