ಲಖನೌ, ಫೆ 05 (DaijiworldNews/HR): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಕ್ರೀಡಾ ಸಚಿವ ಉಪೇಂದ್ರ ತಿವಾರಿ ಅವರು ಓಡೋಡಿ ಬಂದು ಚುನಾವಣಾಧಿಕಾರಿಗಳ ಕಚೇರಿಗಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ವಿಡಿಯೋ ವೈರಲ್ ಆಗಿದೆ.
ಫೆಫ್ನಾ ಕ್ಷೇತ್ರದಿಂದ ಉಪೇಂದ್ರ ತಿವಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಲು ಶನಿವಾರ ಅವರು ಚುನಾವಣಾಧಿಕಾರಿ ಕಚೇರಿಯತ್ತ ಧಾವಿಸಿದ್ದು, ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನು ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.