ಬೆಂಗಳೂರು, ಫೆ 05 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 12,009 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.9.04ಕ್ಕೆ ಇಳಿಕೆ ಕಂಡಿದೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 1,32,796 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇವರಲ್ಲಿ ಬೆಂಗಳೂರಿನಲ್ಲಿ 4,535 ಸೇರಿದಂತೆ ಕರ್ನಾಟಕದಲ್ಲಿ 12,009 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇನ್ನು ರಾಜ್ಯದಲ್ಲಿ ಇಂದು 12,009 ಜನರಿಗೆ ಕೋವಿಡ್ ದೃಢಪಟ್ಟ ಕಾರಣ, ಪಾಸಿಟಿವಿಟಿ ದರ ಶೇ.9.04ಕ್ಕೆ ಇಳಿಕೆ ಕಂಡಿದ್ದು, ಇಂದು 25,854 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈಗ ರಾಜ್ಯಾಧ್ಯಂತ 1,09,203 ಮಂದಿ ಸಕ್ರೀಯ ಸೋಂಕಿತರು ಇದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 50 ಸಾವಿರ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.