ಮುಂಬೈ, ಫೆ 06 (DaijiworldNews/HR): ಕೊರೊನಾ ಸೋಂಕು ತಗುಲಿ ಕಳೆದ ತಿಂಗಳು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಜನವರಿ 8 ರಿಂದ ಚಿಕಿತ್ಸೆ ಪಡೆಯುತ್ತಿರುವ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಚಿತ್ರರಂಗ, ರಾಜಕೀಯ ರಂಗದ ಗಣ್ಯರು, ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇನ್ನು ಶನಿವಾರ ತಡರಾತ್ರಿ ನಟಿ ಶ್ರದ್ಧಾ ಕಪೂರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ, ನಿರ್ಮಾಪಕ ಮಧುರ್ ಭಂಡಾರ್ಕರ್ ಮತ್ತು ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಗಾಯಕಿ ಆಶಾ ಭೋಂಸ್ಲೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಸೋದರಿ ಲತಾ ಮಂಗೇಶ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.