ನವದೆಹಲಿ, ಫೆ 06 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕಳೆದ ಒಂದು ತಿಂಗಳಲ್ಲಿಯೇ ಪತ್ತೆಯಾದ ಅತಿ ಕಡಿಮೆ ಕೇಸ್ ಇದಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1.1 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 865 ಜನ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 501979 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1225011 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 213246 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಶನಿವಾರ 45,10,770 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,46,26,697 ಜನರಿಗೆ ಲಸಿಕೆ ಹಾಕಲಾಗಿದೆ.