ಮುಂಬೈ ,ಫೆ 06 (DaijiworldNews/HR): ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್(92) ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ.
ಲತಾ ಮಂಗೇಶ್ಕರ್ ಅವರ ಅಂತಿಮ ವಿಧಿ ವಿಧಾನಗಳನ್ನು ಸರ್ಕಾರಿ ಗೌರವಗಳೊಂದಿಗೆ ಅವರ ನೆರವೇರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಇನ್ನು ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊರೊನಾ ಕಾಣಿಸಿಕೊಂಡಿದ್ದು, ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದು ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.