ಬೆಂಗಳೂರು, ಫೆ 06 (DaijiworldNews/KP): ಸಹಜವಾಗಿ ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕು ಅನ್ನುವ ಹುಚ್ಚು ಇರುತ್ತದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಇಂದು ಸುದ್ದಿಗಾರಗೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರಿಗೆ ಮಾತ್ರ ಮುಖ್ಯಮಂತ್ರಿ ಆಗಬೇಕೆಂಬ ಹುಚ್ಚು ಇದೆ, ಹೊರತಾಗಿ ಜನ ಸೇವೆ ಮಾಡುವಬೇಕೆನ್ನುವ ಆಸೆ ಇದೀಯಾ ಎಂದು ಕೀಡಿಕಾರಿದರು.
ಸಿದ್ದರಾಮಯ್ಯ ಅವರಿಗೆ ಸಿಎಂ ಆಗುವ ಹುಚ್ಚು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರಿಗೂ ಸಿಎಂ ಆಗಬೇಕು, ಜನರ ಸೇವೆ ಮಾಡಬೇಕು ಅನ್ನೋ ಹುಚ್ಚು ಇರುತ್ತೆ ಆದರೆ ನಿಮಗೆ ಯಾವ ಹುಚ್ಚು ಇರೋದು ಎಂದು ಪ್ರಶ್ನಿಸಿದರು.
ಇನ್ನು ರಾಹುಲ್ ಗಾಂಧಿಯ ಸಲಹೆಗಾರರಾದ ರಾಜು ಅವರು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು ಈ ಕುರಿತು ಸ್ಪಷ್ಟನೆ ನೀಡಿದ ಅವರು, ಸಹಜವಾಗಿಯೇ ಕಾಂಗ್ರೆಸ್ ನಾಯಕರನ್ನು ಭೇಟಿಮಾಡಿ ಮಾತುಕತೆ ನಡೆಸಿದ್ದಾರೆ ಹೊರತು, ಬೇರೆನೂ ಇಲ್ಲ ಎಂದರು.