ಮೈಸೂರು, ಫೆ 06 (DaijiworldNews/HR): ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವುದಾದರೆ ಪಾಕಿಸ್ತಾನಕ್ಕೆ ಹೋಗಿ, ಈ ನೆಲದಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿಯೇ ಇರಬೇಕಾದರೆ ದೇಶದ ಸಂವಿಧಾನ ಮತ್ತು ಸಂಸ್ಕೃತಿಯನ್ನು ಪಾಲಿಸಬೇಕು. ಉರ್ದು ಬೇಕು, ಹಿಜಾಬ್ ಬೇಕು, ಇಸ್ಲಾಂ ಧರ್ಮದ ಸಂಸ್ಕೃತಿ ಪಾಲಿಸಬೇಕು ಎಂದಾದರೆ ಅದಕ್ಕೆ ಪಾಕಿಸ್ತಾನವನ್ನು ಕೊಟ್ಟಿದ್ದೇವೆ. ಅಲ್ಲಿಗೆ ಹೋಗಿ" ಎಂದರು.
ಇನ್ನು ಹಿಜಾಬ್ ಧರಿಸಲು ಅವಕಾಶ ನೀಡಿ ಎನ್ನುವವರು, ನಾಳೆ ಶಾಲೆಯಲ್ಲಿ ಮಸೀದಿ ಕಟ್ಟಬೇಕು ಎನ್ನುತ್ತಾರೆ. ಅಂತವರಿಗೆ ಬೆಂಬಲ ಕೊಡುವವರು ನಿಜವಾದ ದೇಶದ್ರೋಹಿಗಳು ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ದೇಶವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.