ಬೆಂಗಳೂರು, ಫೆ 06 (DaijiworldNews/HR): ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಅನೇಕ ಯೋಜನೆಗಳ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಸಮಯ ಕೋರಲಾಗಿದ್ದು, ರಾಜ್ಯ ಬಜೆಟ್, ಹಣಕಾಸಿನ ಪರಿಸ್ಥಿತಿ, ಜಿಎಸ್ಟಿ, ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ' ಎಂದರು.
ಇನ್ನು ಪಕ್ಷದ ವರಿಷ್ಠರ ಭೇಟಿಗೂ ಸಮಯ ಕೋರಲಾಗಿದ್ದು, ಸಂಜೆಯೊಳಗೆ ಭೇಟಿಯ ಸಮಯ ನಿಗದಿ ಆಗಲಿದೆ ಎಂದು ತಿಳಿಸಿದ್ದಾರೆ.