ಉತ್ತರ ಪ್ರದೇಶ, ಫೆ 06 (DaijiworldNews/KP): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಿದೆ.
ಭಾರತ ಕಂಡ ಶ್ರೇಷ್ಠ ವ್ಯಕ್ತಿ, ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಇಂದು ಇಹಲೋಕ ತ್ಯಜಿಸಿರುವ ಹಿನ್ನೆಲೆಯಲ್ಲಿ ಭಾರತದ್ಯಂತ ಎರಡು ದಿನ ಶೋಕಾಚರಣೆಯನ್ನು ಘೋಷಿಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ ದಿನಾಂಕವನ್ನು ರದ್ದುಗೊಳಿಸಲು ಬಿಜೆಪಿ ನಿರ್ಧಾರಿಸಿದೆ.
ಗಾನ ಕೋಗಿಲೆ ಲತಾ ಮಂಗೇಶ್ಕರ್ ವಿಧಿವಶರಾಗಿರುವ ಸಂದರ್ಭದಲ್ಲಿ ನಾವು ಲೋಕ ಕಲ್ಯಾಣ ಸಂಕಲ್ಪ ಪತ್ರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದು ಸರಿಯಲ್ಲ ಈ ಕಾರಣದಿಂದ ನಾವು ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ ಹಾಗೂ ಪ್ರಣಾಳಿಕೆ ಬಿಡುಗಡೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದು ಯುಪಿ ಬಿಜೆಪಿ ರಾಜ್ಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಗಾಯಕಿ ಲತಾ ಮಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ವರ್ಚುವಲ್ ರ್ಯಾಲಿ ಹಾಗೂ ಬಿಜೆಪಿ ಪಕ್ಷದ ಪ್ರಮುಖ ಕಾರ್ಯಕ್ರಮಗಳನ್ನು ಕೂಡ ರದ್ದುಗೊಳಿಸಲಾಗಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.