ಮಹಾರಾಷ್ಟ್ರ, ಫೆ 06 (DaijiworldNews/HR): ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ಫೆಬ್ರವರಿ 7ರಂದು ಸೋಮವಾರ ಸಾರ್ವಜನಿಕ ರಜೆ ಘೋಷಿಸಿದೆ.
ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ತಿಳಿಸಿದ್ದು, ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ನಾಳೆ ಸಾರ್ವಜನಿಕ ರಜೆ ಘೋಷಿಸಲಾಗಿದೆ ಎಂದಿದೆ.
ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಬಳಿಕ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.