ಅನಂತಪುರಂ, ಫೆ 07 (DaijiworldNews/MS):ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಬುಡಗಾವಿ ಗ್ರಾಮದಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.
ಉರವಕೊಂಡ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ವೆಂಕಟ ಸ್ವಾಮಿ ಅವರ ಪ್ರಕಾರ, ಭಾನುವಾರದಂದು ಈ ಘಟನೆ ನಡೆದಿದ್ದು, ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಒಂಬತ್ತು ಮಂದಿ ಪ್ರಯಾಣಿಕರಿದ್ದರು ಇವರೆಲ್ಲರೂ ಬಳ್ಳಾರಿಯಲ್ಲಿ ವಿವಾಹ ಮುಗಿಸಿಕೊಂಡು ನಿಮ್ಮಗಲ್ಲುಗೆ ಹಿಂತಿರುಗುತ್ತಿದ್ದರು. ಈ ವೇಳೆ ಅತಿವೇಗದಲ್ಲಿ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ" ಎಂದು ಹೇಳಿದ್ದಾರೆ.
ನಜ್ಜುಗುಜ್ಜಾದ ವಾಹನದ ಅಡಿಯಲ್ಲಿ ಸಿಲುಕಿಕೊಂಡ ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಯ್ಯಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.