ಚಿತ್ರದುರ್ಗ, ಫೆ 07 (DaijiworldNews/MS): ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದ ಬಳಿ ನಡೆದ ಅಪಘಾತದಲ್ಲಿ ಕುಂದಾಪುರ ಮೂಲಕ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಉಡುಪಿ ಜಿಲ್ಲೆಯ ಕುಂದಾಪುರದ ಗೀತಾ (32) ಶಾರದಾ (60) ಹಾಗೂ ಧ್ರುತಿ (5) ಎಂದು ಗುರುತಿಸಲಾಗಿದೆ
ನಾಗೇಶ (65), ದಯಾನಂದ (66), ಸುಧೀಂದ್ರ (35) ಗಾಯಗೊಂಡಿದ್ದು, ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.