ನವದೆಹಲಿ, ಫೆ 07 (DaijiworldNews/HR): ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು, ಪ್ರತಿ ದಿನ 1 ಲಕ್ಷಕ್ಕೂ ಅಧಿಕ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಕುಸಿತ ಕಂಡು ಕಳೆದ 24 ಗಂಟೆಯಲ್ಲಿ 83,876 ಮಂದಿಗೆ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 83,876 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 895 ಜನ ಮಹಾಮಾರಿಗೆ ಬಲಿಯಾಗಿದ್ದು, ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 502874ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1108938 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 199054 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40660202 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಭಾನುವಾರ 14,70,053 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,69,63,80,755 ಜನರಿಗೆ ಲಸಿಕೆ ಹಾಕಲಾಗಿದೆ.