ಬೆಂಗಳೂರು,ಫೆ 07 (DaijiworldNews/KP): ಯಾರು, ಯಾವ ಕುಮಾರಸ್ವಾಮಿ? ನಾನು ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಆಗುವ ಹುಚ್ಚು ಅದಕ್ಕೆ ಮುಸ್ಲಿಮರನ್ನು ಓಲೈಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕುಮಾರಸ್ವಾಮಿ? ನಾನು ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.
ಅವರು ರಾಜಕೀಯ ಪಕ್ಷದ ನಾಯಕರು, ನನ್ನ ಪಾಡಿಗೆ ನಾನು ಮಾತನಾಡುತ್ತೇನೆ ಅಷ್ಟೇ, ಇದಕ್ಕೆಲ್ಲ ನೋ ರಿಯಾಕ್ಷನ್ ಟು ಮಿಸ್ಟರ್ ಕುಮಾರಸ್ವಾಮಿ ಎಂದು ವ್ಯಂಗ್ಯವಾಡಿದರು.
ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮ,ದ್, ಇಬ್ರಾಹಿಂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ, ಅಲ್ಲದೆ ಈ ಬಾರಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾಗಿ ಅಲ್ಪಸಂಖ್ಯಾತರನ್ನು ಆಯ್ಕೆಮಾಡುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು.