ಡೆಹ್ರಾಡೂನ್, ಫೆ 07 (DaijiworldNews/MS): ಬಾಲಿವುಡ್ ನಟ ಅಕ್ಷಯ್ ಕುಮಾರ್ ಉತ್ತರಾಖಂಡದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಫೆಬ್ರವರಿ 7ರ ಸೋಮವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಡೆಹ್ರಾಡೂನ್ನಲ್ಲಿರುವ ಸಿಎಂ ನಿವಾಸದಲ್ಲಿ ಭೇಟಿಯಾದರು.
ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ, ಅಕ್ಷಯ್ ಕುಮಾರ್ ಉತ್ತರಾಖಂಡದ ಬ್ರಾಂಡ್ ಅಂಬಾಸಿಡರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಧಮಿ ಹೇಳಿದ್ದಾರೆ.
"ನಾವು ಅಕ್ಷಯ್ ಕುಮಾರ್ ಅವರಿಗೆ ಪ್ರಸ್ತಾವನೆಯನ್ನು ನೀಡಿದ್ದು ಅವರು ಅದನ್ನು ಒಪ್ಪಿಕೊಂಡಿದ್ದಾರೆ. ಇನ್ನುಮುಂದೆ ಅಕ್ಷಯ್ ಅವರು ಉತ್ತರಾಖಂಡ್ನ ಬ್ರಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಾರೆ" ಎಂದು ಧಾಮಿ ಹೇಳಿದ್ದಾರೆ.