ಹರಿದ್ವಾರ, ಫೆ. 07 (DaijiworldNews/SM): ಉತ್ತರಾಖಂಡ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಿದ್ಧತೆ ನಡೆಸುತ್ತಿದೆ. ಚುನಾವಣೆ ಗೆಲ್ಲಲೇ ಬೇಕಾದ ನಿರ್ಧಾರಕ್ಕೆ ಆಮ್ ಆದ್ಮಿ ಪಕ್ಷ ತಯಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದೆ.
ಪ್ರಣಾಳಿಕೆ ಬಿಡುಗಡೆಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಿರುದ್ಯೋಗ ಭತ್ಯೆ, ಉಚಿತ ವಿದ್ಯುತ್ ಸೇರಿದಂತೆ 11 ಅಂಶಗಳ ಕಾರ್ಯಸೂಚಿಯನ್ನು ವಿವರಿಸಿದ್ದಾರೆ. ಎಲ್ಲರಿಗೂ ಉಚಿತ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ, ನಿರುದ್ಯೋಗ ಭತ್ಯೆ ಹಾಗೂ ಉಚಿತ ವಿದ್ಯುತ್ ನೀಡುವುದಾಗಿ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಭರವಸೆ ನೀಡಿದ್ದಾರೆ.
ಉತ್ತರಾಖಂಡದಲ್ಲಿ ಈ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿ ಸರಕಾರಗಳು ಸಂಪೂರ್ಣ ಲೂಟಿ ನಡೆಸಿವೆ. ಇದರಿಂದ ತಪ್ಪಿಸಲು ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.