ಬೆಂಗಳೂರು, ಫೆ 08 (DaijiworldNews/MS): ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಸೌಜನ್ಯತೆಯ ಆಧಾರದ ಮೇಲೆ ಕೊಠಡಿಯಲ್ಲಿ ಕೂರಿಸಲಾಗಿದೆ. ಅಲ್ಲಿ ಯಾವ ತರಗತಿಗಳೂ ನಡೆಯುತ್ತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಕೂಡಾ ನಮ್ಮ ಮಕ್ಕಳು, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ . ಅವರೆಲ್ಲರೂ ಮುಗ್ಧತೆ ಇರುವ ಹೆಣ್ಣುಮಕ್ಕಳು. ಆದರೆ ಅವರ ಮುಗ್ಧತೆಯನ್ನ ಕಾಣದ ಕೈಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ
ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ . ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ಶಾಲಾ ಕಾಲೇಜಿನಲ್ಲಿ ಧರ್ಮದ ಶಿಕ್ಷಣವಲ್ಲ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲೆಗೆ ಬರಬೇಕು ಎಂದು ಹೇಳಿದ್ದಾರೆ.