ನವದೆಹಲಿ, ಫೆ 08 (DaijiworldNews/HR): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 67,597 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 67,597 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1188 ಜನ ಮಹಾಮಾರಿಗೆ ಬಲಿಯಾಗಿ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 504062ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 994891 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 180456 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 40840658 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಸೋಮವಾರ 55,78,297 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,70,21,72,615 ಜನರಿಗೆ ಲಸಿಕೆ ಹಾಕಲಾಗಿದೆ.