ಬೆಂಗಳೂರು, ಫೆ 08 (DaijiworldNews/KP): ಧರಣಿ ನಿರತರಾಗಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ, ಪರೀಕ್ಷೆಗೂ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹೈಕೋರ್ಟ್ನಿಂದ ತೀರ್ಪು ಬರುವ ನಿರೀಕ್ಷೆ ಇದೆ, ಅಲ್ಲಿಯವರೆಗೂ ರಾಜ್ಯ ಸರ್ಕಾರ ಜಾರಿಗೊಳಿಸದ ನಿಯಮವನ್ನು ಪಾಲಿಸಬೇಕು, ಅದನ್ನು ಬಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದರು.
ಇನ್ನು ವಿದ್ಯಾರ್ಥಿಗಳು ಧರಣಿಯನ್ನು ಈ ಕೂಡಲೇ ಕೈಬಿಟ್ಟು ತರಗತಿಗಳಿಗೆ ಹಾಜರಾಗಬೇಕು. ಒಂದು ವೇಳೆ ಪ್ರತಿಭಟನೆಯನ್ನು ಕೊನೆಗೊಳಿಸದೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ ಮತ್ತು ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಜೊತೆಗೆ ವಿದ್ಯಾರ್ಥಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.