ನವದೆಹಲಿ, ಫೆ 08 (DaijiworldNews/HR): ಉತ್ತರಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ಪ್ರಣಾಳಿಕೆ "ಲೋಕ ಕಲ್ಯಾಣ್ ಸಂಕಲ್ಪ ಪತ್ರ" ಬಿಡುಗಡೆಗೊಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸಮ್ಮುಖದಲ್ಲಿ ಅಮಿತ್ ಶಾ ಅವರು ಬಿಜೆಪಿ ಪ್ರಣಾಳಿಕೆ ಲೋಕ ಕಲ್ಯಾಣ ಸಂಕಲ್ಪ ಪತ್ರವನ್ನು ಬಿಡುಗಡೆಗೊಳಿಸಿದ್ದಾರೆ.
ಅಮಿತ್ ಶಾ ಬಿಡುಗಡೆ ಮಾಡಿರುವ ಬಿಜೆಪಿ ಪ್ರಣಾಳಿಕೆಯಲ್ಲಿ, ರೈತರ ಕೃಷಿಗೆ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಒಬ್ಬ ಸದಸ್ಯನಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶದಲ್ಲಿ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆ.10, 14, 20, 23, 27 ಮತ್ತು ಮಾರ್ಚ್ 3, 7ರಂದು ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.